Home ಟಾಪ್ ಸುದ್ದಿಗಳು ಹೈದರಾಬಾದ್ : ಇಡಿ ಕಚೇರಿ ಬಳಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

ಹೈದರಾಬಾದ್ : ಇಡಿ ಕಚೇರಿ ಬಳಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

ತೆಲಂಗಾಣ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದನ್ನು ಕಾರ್ಯಕರ್ತರು ಪ್ರತಿಭಟಿಸುತ್ತಿದ್ದು, ಇಂದು ಹೈದರಾಬಾದ್ ನ ಇಡಿ ಕಚೇರಿ ಬಳಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.

ಜಾರಿ ನಿರ್ದೇಶನಾಲಯ ವಿಚಾರಣೆಯ ಹೆಸರಿನಲ್ಲಿ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 75 ಕಾಂಗ್ರೆಸ್ ಸಂಸದರು ಮತ್ತು ಹಲವಾರು ಕಾರ್ಯಕರ್ತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp
Exit mobile version