ನಾನು ಕೂಡ ರಾಮಮಂದಿರ ನಿರ್ಮಾಣಕ್ಕೆ 10 ಲಕ್ಷ ಕೊಟ್ಟಿದ್ದೆ: ಲಕ್ಷ್ಮಣ ಸವದಿ

Prasthutha|

ಬೆಂಗಳೂರು: ನಾನು ಕೂಡ ರಾಮಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಬಿಜೆಪಿಗೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟುಕೊಂಡು ಅದಕ್ಕೆ ಬಣ್ಣ ಕಟ್ಟಿ ರಾಜಕೀಯ ಮಾಡ್ತಾರೆ. ಈಗಾಗಲೇ ಗೃಹ ಸಚಿವರು ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈಗ ಇದಕ್ಕೆ ರಾಜಕೀಯ ಬಣ್ಣ ಬಳಿಯೋದು ಬೇಡ. ಹಳೆ ಕೇಸ್ ಆಗಿರುವುದರಿಂದ ಕ್ಲೋಸ್ ಮಾಡಬೇಕು ಅಂತಾ ಅದರ ಪ್ರಕ್ರಿಯೆ ಆಗ್ತಿದೆ. ಬಿಜೆಪಿ ಅವರಿಗೆ ಕೆಲಸ ಇಲ್ಲ. ಭಾವನಾತ್ಮಕ ವಿಚಾರ ತೆಗೆದುಕೊಂಡು ಸೃಷ್ಟಿ ಮಾಡಿ, ಬಣ್ಣ ಕಟ್ಟಿ ಈ ರೀತಿ ಮಾಡ್ತಾರೆ. ಇದರಿಂದ ಬಿಜೆಪಿ ಅವರಿಗೆ ಲಾಭ ಇಲ್ಲ ಅಂತ ಕಿಡಿಕಾರಿದ್ದಾರೆ.

Join Whatsapp