ನಾನು ಬಜರಂಗದಳ ಕಾರ್ಯಕರ್ತೆ, ತಾಕತ್ತು ಇದ್ದರೆ ನನ್ನನ್ನು ಬಂಧಿಸಿ: ಕಾಂಗ್ರೆಸ್’ಗೆ ಶೋಭಾ ಕರಂದ್ಲಾಜೆ ಸವಾಲು

Prasthutha|

ಬೆಂಗಳೂರು: ನಾನು ಬಜರಂಗದಳದ ಕಾರ್ಯಕರ್ತೆ, ನಿಮಗೆ ತಾಕತ್ತು ಇದ್ದರೆ ನನ್ನನ್ನು ಬಂಧಿಸಿ. ಬಜರಂಗದಳವನ್ನು ಬ್ಯಾನ್ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

- Advertisement -


ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೋಭಾ ಕರಂದ್ಲಾಜೆ , ಕಾಂಗ್ರೆಸ್ ಈ ಹಿಂದೆ ಮೂರು ಬಾರಿ ಆರ್ ಎಸ್ ಎಸ್ ಅನ್ನು ಬ್ಯಾನ್ ಮಾಡಿತ್ತು. ಆದರೆ, ಇವತ್ತು ಜಗತ್ತಿನ ಅತಿ ದೊಡ್ಡ ಸಂಘಟನೆ ಆರ್ ಎಸ್ ಎಸ್ ಆಗಿದೆ. ಆರ್ ಎಸ್ ಎಸ್ ವಿವಿಧ ವಿಭಾಗ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್’ಗೆ ದೇಶದ ಹಿಂದು ಯುವಜನರಲ್ಲಿ ಜಾಗೃತಿ ಕೆಲಸ ಮಾಡುತ್ತಿರುವ ಬಜರಂಗದಳ ವಿರೋಧಿ ಎನಿಸಿದೆ ಎಂದು ಹೇಳಿದರು.


ಚುನಾವಣೆ ಪ್ರಚಾರ ಸಭೆಗಳಲ್ಲಿ ಬಜರಂಗದಳ ನಿಷೇಧದ ಬಗ್ಗೆ ತಾಕತ್ತಿದ್ದರೆ ಮಾತನಾಡಿ. ಮುಸ್ಲಿಮರ ವೋಟುಗಳಿಂದ ಮಾತ್ರ ಗೆದ್ದು ಬನ್ನಿರಿ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

- Advertisement -


ಕೇವಲ ಮುಸ್ಲಿಂ ಮತಗಳಲ್ಲಿ ಗೆದ್ದು ಬರುತ್ತೀರಾ? ಕಾಂಗ್ರೆಸ್ ಗೆ ಆ ತಾಕತ್ತು ಇದೆಯಾ? ಈ ಪ್ರಣಾಳಿಕೆಯಲ್ಲಿ ಕೊಟ್ಟಿರೋದು ಕೇವಲ ಒಂದು ಧರ್ಮದ ಓಲೈಕೆ ಮಾಡಲು ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ನೀವು ಅವರನ್ನೇ ಓಲೈಕೆ ಮಾಡಿ, ಹಿಂದುಗಳ ಮತ ನಿಮಗೆ ಸಿಗುವುದಿಲ್ಲ. ಮತ್ತೊಮ್ಮೆ ಹೇಳುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಬಂಧಿಸಿ ಎಂದು ಶೋಭಾ ಕರಂದ್ಲಾಜೆ ಸವಾಲು ಹಾಕಿದರು.