Home ಟಾಪ್ ಸುದ್ದಿಗಳು ನಾನು ನಿಯತ್ತಿನ ನಾಯಿ: ಸಿಎಂ ಬೊಮ್ಮಾಯಿ

ನಾನು ನಿಯತ್ತಿನ ನಾಯಿ: ಸಿಎಂ ಬೊಮ್ಮಾಯಿ

ಬಳ್ಳಾರಿ: ನಾನು ನಿಯತ್ತಿನ ನಾಯಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಅವರು ಬಳ್ಳಾರಿಯಲ್ಲಿ ಇಂದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಅವರು ನಾಯಿ ಮರಿಯಂತೆ ಮೋದಿ ಮುಂದೆ ಇರುತ್ತಾರೆಂಬ ಟೀಕೆ ಮಾಡಿರುವುದಕ್ಕೆ ಈ ರೀತಿ ಪ್ರತಿಕ್ರಿಯಿಸಿದರು.
ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಉತ್ತರ ನೀಡುತ್ತಾರೆಂದರು.


ಮುಖ್ಯಮಂತ್ರಿಯವರನ್ನು ನಾಯಿ ಮರಿ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ನಾನು ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನು ಜನರ ಪರವಾಗಿ ಉಳಿಸಿಕೊಂಡು ಹೋಗುವೆ. ಅವರ ಹಾಗೆ ಸಮಾಜ ಒಡೆಯುವ ಕೆಲಸ ಮಾಡಲ್ಲ. ಸೌಭಾಗ್ಯ ಕೊಡುತ್ತೇವೆ ಅಂತಹ ದೌರ್ಭಾಗ್ಯ ಕೊಟ್ಟಿಲ್ಲ. ಸುಳ್ಳು ಹೇಳಿಲ್ಲ. ಆ ತರಹದ ಕೆಲಸ ಮಾಡಿಲ್ಲ ಎಂದು ತಿರುಗೇಟು ನೀಡಿದರು.


ಸಿದ್ದರಾಮಯ್ಯ ಅವರು ಬಹಿರಂಗ ಚರ್ಚೆಗೆ ಆಹ್ಚಾನ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಚರ್ಚೆಗೆ ವಿಧಾನಸಭೆಗಿಂತ ದೊಡ್ಡ ವೇದಿಕೆ ಯಾವುದು ಇದೆಯಾ? 15 ದಿನ ಸದನ ನಡೆಯಿತು. ಅದಕ್ಕಿಂತಲೂ ಹಿಂದೆ ನಡೆದಿದೆ. ಅಲ್ಲೆ ಚರ್ಚೆ ಮಾಡಿಲ್ಲ. ಹೊರಗೆ ರಾಜಕೀಯವಾಗಿ ಹೇಳಿಕೆ ನೀಡುತ್ತಾರೆ. ವಿಧಾನ ಸೌಧಕ್ಕಿಂತ ಪವಿತ್ರ ವೇದಿಕೆ ಬೇಕಾ ? ಎಂದು ಪ್ರಶ್ನಿಸಿದರು.

Join Whatsapp
Exit mobile version