Home ಟಾಪ್ ಸುದ್ದಿಗಳು ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ: ಶೋಭಾ ಕರಂದ್ಲಾಜೆ

ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ: ಶೋಭಾ ಕರಂದ್ಲಾಜೆ

ವಿಜಯಪುರ: ಲೋಕಸಭೆಗಾಗಿ ನಾಳೆ ಅಥವಾ ನಾಡಿದ್ದು ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಸಾಧ್ಯತೆಯಿದೆ. ಅದರ ಜೊತೆಜೊತೆಗೆ ಆಡಳಿತಾರೂಢ ಬಿಜೆಪಿ ಪಕ್ಷವು ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.


ತಮಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡ್ತಾರೆಂಬ ವಿಚಾರವನ್ನು ಪ್ರಸ್ತಾಪಿಸಿದ ಶೋಭಾ ನಾನು ಫೈಟರ್, ಎಲ್ಲೇ ಟಿಕೆಟ್ ಕೊಟ್ಟರೂ ಹೋರಾಡುತ್ತೇನೆ, ಗೆಲ್ಲುತ್ತೇನೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಾರಾಸಗಟಾಗಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.


ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಬಗ್ಗೆ ಮಾತನಾಡಿದ ಅವರು ನಾನು ಹೆತ್ತ ತಾಯಿಗೆ ದ್ರೋಹ ಮಾಡಿಲ್ಲ. ಒಮ್ಮೆ ಟಿಕೆಟ್ ಕೊಟ್ಟರೆ ಮುಗೀತು, ಅವರ ಪರವಾಗಿಯೇ ಕೆಲಸ ಮಾಡ್ತೇವೆ ಎಂಬುದ ಅರ್ಥ ಮಾಡಿಕೊಳ್ಳಬೇಕು. ಹಾಗಂತ ಯಾರೇ ಅಭ್ಯರ್ಥಿಯಾಗಲಿ ತಮ್ಮ ಸೋಲನ್ನು ಮತ್ತೊಬ್ಬರ ಮೇಲೆ ಹೇಳೋದು ದ್ರೋಹ ಬಗೆದಂತೆ. ಯಾರಿಗೆ ಟಿಕೆಟ್ ನೀಡಬೇಕೆಂದು ನಮ್ಮ ಹಿರಿಯರು ತೀರ್ಮಾನಿಸ್ತಾರೆ ಎಂದು ವಿಜಯಪುರ ನಗರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇರ ನುಡಿಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Join Whatsapp
Exit mobile version