ನಾನು ರಾಮಭಕ್ತ, ರಾಮನಗರದಲ್ಲಿ ರಾಮೋತ್ಸವ ಮಾಡಿಸುವೆ: ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್

Prasthutha|

ರಾಮನಗರ: ನಾನು ಕೂಡಾ ರಾಮಭಕ್ತ. ರಾಮನನ್ನು ಪೂಜೆ ಮಾಡುತ್ತೇನೆ. ರಾಮನಗರದಲ್ಲಿ ರಾಮೋತ್ಸವ ಮಾಡಿಸುವೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

- Advertisement -

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನಾನೂ ಕೂಡಾ ರಾಮಭಕ್ತ. ನಾನು ರಾಮನನ್ನು ಪೂಜೆ ಮಾಡುತ್ತೇನೆ. ರಾಮನಗರದಲ್ಲಿ ರಾಮೋತ್ಸವ ನಡೆಸಬೇಕು ಎಂದು ಚಿಂತನೆ ಮಾಡಿದ್ದೆವು. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಎಲ್ಲಾ ದೇವರನ್ನು ಪೂಜಿಸುತ್ತೇನೆ. ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನು ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ

Join Whatsapp