ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ: ಮಾಜಿ ಶಾಸಕ ರಾಜೂಗೌಡ

Prasthutha|

ಯಾದಗಿರಿ: ವಿ ಸೋಮಣ್ಣ ರಾಜ್ಯಾಧ್ಯಕ್ಷ ಹುದ್ದೆ ಬೇಡಿಕೆ ಇಟ್ಟ ಬೆನ್ನಲ್ಲೇ ಇದೀಗ ಮಾಜಿ ಶಾಸಕ ರಾಜೂಗೌಡ ಸಹ ತಮನ್ನ ಅಧ್ಯಕ್ಷರನ್ನಾಗಿ ಮಾಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ.

- Advertisement -

ಈ ಬಗ್ಗೆ ಇಂದು ಯಾದಗಿರಿಯ ಹುಣಸಗಿ ಪಟ್ಟಣದಲ್ಲಿ ಮಾತನಾಡಿದ ರಾಜೂಗೌಡ, ಬಿಜೆಪಿ ರಾಜ್ಯಾಧ್ಯಕ್ಷನಾಗುವ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನಾನು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ. ಯಾವ ಮುಖ ಇಟ್ಟುಕೊಂಡು ನಾನು ಕಾಂಗ್ರೆಸ್ ಗೆ ಹೋಗಬೇಕು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ತಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರಿಂದ ಕಾಂಗ್ರೆಸ್ಗೆ ಹೋಗಲ್ಲ ಎನ್ನುವ ಅರ್ಥದಲ್ಲಿ ಹೇಳಿದರು.

Join Whatsapp