Home ಟಾಪ್ ಸುದ್ದಿಗಳು ದಾವಣಗೆರೆ ಕ್ಷೇತ್ರದಿಂದ ನಾನೂ ಆಕಾಂಕ್ಷಿ: ರೇಣುಕಾಚಾರ್ಯ

ದಾವಣಗೆರೆ ಕ್ಷೇತ್ರದಿಂದ ನಾನೂ ಆಕಾಂಕ್ಷಿ: ರೇಣುಕಾಚಾರ್ಯ

ಹಾಸನ: ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ನಾನು ಕೂಡ ಆಕಾಂಕ್ಷಿ. ಕಾರ್ಯಕರ್ತರು, ಮುಖಂಡರು ಹಾಗೂ ಸ್ಥಳೀಯ ಜನರೂ ಇದನ್ನೇ ಅಪೇಕ್ಷಿಸಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ಮುಂದೆ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುವೆ’ ಎಂದರು. ವಿಧಾನ ಪರಿಷತ್ ನಲ್ಲಿ ಮೈತ್ರಿ ಅಭ್ಯರ್ಥಿ ಸೋಲಿನ ಕುರಿತು ಪ್ರತಿಕ್ರಿಯಿಸಿ, ‘ವಿಧಾನ ಪರಿಷತ್ ಚುನಾವಣೆ ಸಾರ್ವಜನಿಕ ಚುನಾವಣೆಯಲ್ಲ. ಮುಂದಿನ ಚುನಾವಣೆಗೆ ಅದು ದಿಕ್ಸೂಚಿಯೂ ಅಲ್ಲ’ ಎಂದರು. ‘ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯೂ ಶೇ 50ರಷ್ಟು ಮಹಿಳೆಯರಿಗೆ ಮಾತ್ರ ತಲುಪುತ್ತಿದೆ. ಯುವನಿಧಿ ಹಳ್ಳ ಹಿಡಿದಿದೆ. ಶಕ್ತಿ ಯೋಜನೆಯೂ ವಿಫಲವಾಗಿದ್ದು, ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಇಲ್ಲದೆ ಜನ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಆರೋಪಿಸಿದರು.

Join Whatsapp
Exit mobile version