Home ಟಾಪ್ ಸುದ್ದಿಗಳು ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ

ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ

0

ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾ ಚರ್ಚೆಯ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸವಿದೆ. ನನ್ನ ಹೋರಾಟದ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ಹೈಕಮಾಂಡ್‌ಗೆ ತೃಪ್ತಿಯಿದೆ. ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದಿದ್ದಾರೆ.

ನನ್ನ ನಗು ಮುಖ ನೋಡಿದರೆ ನಿಮಗೆ ನಾನು ಬದಲಾಗುತ್ತೇನೆ ಎಂದು ಅನ್ನಿಸುತ್ತದಾ? ನಾನು ಬದಲಾಗಬೇಕಾ? ಮುಂದುವರಿಯಬೇಕಾ? ಮಾಧ್ಯಮದವರೇ ಹೇಳಿ ಎಂದು ನಗುತ್ತಲೇ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿದೆ. ಇ-ಖಾತಾ ಪಡೆಯಲು ಜನ ತಿಂಗಳುಗಟ್ಟಲೇ ಪರದಾಡುತ್ತಿದ್ದಾರೆ. ಗ್ರಾಮೀಣ ಭಾಗದಲ್ಲೂ ಆಸ್ತಿ ತೆರಿಗೆ ಹೆಚ್ಚಿಸಲು ಸರ್ಕಾರ ಚಿಂತನೆ ಆರಂಭಿಸಿದೆ. ಬಿಜೆಪಿ ಹೋರಾಟದ ಫಲವಾಗಿ ವಾಲ್ಮೀಕಿ ಹಗರಣ ಸಿಬಿಐ ತನಿಖೆಗೆ ಹೋಗಿದೆ. ಸಿದ್ದರಾಮಯ್ಯ ಸರ್ಕಾರ ಭಂಡ ಸರ್ಕಾರ. ಭಂಡತನದಿಂದ ಸರ್ಕಾರ ಮುಂದುವರಿಯುತ್ತಿದೆ. ಕಾಂತರಾಜ್ ವರದಿಯನ್ನು ಸಿಎಂ ರಾಜಕೀಯ ಅಸ್ತ್ರವಾಗಿ ಬಳಕೆ ಮಾಡುತ್ತಿದ್ದಾರೆ. ಕುರ್ಚಿ ಚರ್ಚೆ ಶುರುವಾದಾಗ ಕಾಂತರಾಜ್ ವರದಿಯನ್ನು ಸಿಎಂ ಮುನ್ನೆಲೆಗೆ ತರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version