Home ಟಾಪ್ ಸುದ್ದಿಗಳು ಆದೇಶದ ಅನುಷ್ಠಾನಕ್ಕಾಗಿ ನಾನು ಇಲ್ಲಿಗೆ ಬಂದಿರುವೆ: ಜಹಾಂಗೀರ್ ಪುರಿಯಲ್ಲಿ ಬೃಂದಾ ಕಾರಟ್ ಹೇಳಿಕೆ

ಆದೇಶದ ಅನುಷ್ಠಾನಕ್ಕಾಗಿ ನಾನು ಇಲ್ಲಿಗೆ ಬಂದಿರುವೆ: ಜಹಾಂಗೀರ್ ಪುರಿಯಲ್ಲಿ ಬೃಂದಾ ಕಾರಟ್ ಹೇಳಿಕೆ

ನವದೆಹಲಿ: ಅಕ್ರಮ ಒತ್ತುವರಿಯನ್ನು ತೆರವಿಗೆ ತಡೆ ನೀಡಿ, ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಸಿಪಿಐ(ಎಂ) ಪಕ್ಷದ ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಜಹಾಂಗೀರ್ ಪುರಿಗೆ ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ಒತ್ತುವರಿ ಕಾರ್ಯಾಚರಣೆಗೆ ಸುಪ್ರೀಂ ತಡೆ ನೀಡಿದೆ. ಈ  ಆದೇಶದ ಅನುಷ್ಠಾನಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು.

ನಾನು ಜಹಾಂಗೀರ್ ಪುರಿ ಜನರಿಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಮತ್ತು ಸುಪ್ರೀಂ ಕೋರ್ಟ್ ನ ಮುಂದಿನ ಆದೇಶಕ್ಕಾಗಿ ಕಾಯುವಂತೆ ಮನವಿ ಮಾಡುತ್ತೇನೆ. ಧ್ವಂಸ ಮಾಡುವ ಕಾರ್ಯಾಚರಣೆಗಳು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಸುಪ್ರೀಂ ಆದೇಶದ ಪ್ರಕಾರ ಯಾವುದೇ ನೆಲಸಮ ಮಾಡುವಂತಿಲ್ಲ ಎಂದರು.

ಅಕ್ರಮವನ್ನು ತೆರವು ಕಾರ್ಯಾಚರಣೆಯ ಮೂಲಕ ಕಾನೂನು ಮತ್ತು ಸಂವಿಧಾನವನ್ನು ನೆಲಸಮಗೊಳಿಸಲಾಗುತ್ತಿದೆ. ಕನಿಷ್ಠ ಸುಪ್ರೀಂ ಕೋರ್ಟ್ ಮತ್ತು ಅದರ ಆದೇಶವನ್ನು ಬುಲ್ಡೋಜರ್ ಮಾಡಬಾರದು ಎಂದು ಬೃಂದಾ ಕಾರಟ್ ಹೇಳಿದರು.

Join Whatsapp
Exit mobile version