Home ಟಾಪ್ ಸುದ್ದಿಗಳು ನಾನು ಪ್ರಾಣಿ ಹತ್ಯೆ ನಿಷೇಧ ಪರ: ಆದರೆ ಸಂಪುಟದಲ್ಲಿ ಈ ಬಗ್ಗೆ ಮಾತನಾಡುವುದಿಲ್ಲ ಎಂದ ರಾಮಲಿಂಗಾರೆಡ್ಡಿ

ನಾನು ಪ್ರಾಣಿ ಹತ್ಯೆ ನಿಷೇಧ ಪರ: ಆದರೆ ಸಂಪುಟದಲ್ಲಿ ಈ ಬಗ್ಗೆ ಮಾತನಾಡುವುದಿಲ್ಲ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು: ನಾನು ಪ್ರಾಣಿಹತ್ಯೆ ನಿಷೇಧ ಪರ ಇದ್ದೇನೆ. ಆದರೆ ಸಂಪುಟದಲ್ಲಿ ಈ ಬಗ್ಗೆ ಮಾತನಾಡುವುದಿಲ್ಲ. 64 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬ ನಿಲುವು ನನ್ನದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.


ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣ ನಿಷೇಧ ಮಾಡುವುದಿಲ್ಲ. ಬಿಜೆಪಿಯವರು ರೈತರಿಗೆ ಅನಾನುಕೂಲವಾಗು ರೀತಿ ಮಾಡಿದ್ದರು. ಈ ಕಾಯ್ದೆಯ ಮೂಲಕ ಬಿಜೆಪಿಯವರ ಸಂಘಟನೆಗಳು ವಸೂಲಿ ದಂಧೆ ಮಾಡಿಕೊಂಡಿದ್ದರು. ನಾವು ಕಾಯ್ದೆಯ ಕೆಲವು ನಿಯಮಗಳನ್ನು ಸಡಿಲಗೊಳಿಸಲಿದ್ದೇವೆ ಎಂದು ಹೇಳಿದ್ದಾರೆ.


ನಗರ ಅಭಿವೃದ್ಧಿ ಬಗ್ಗೆ ಮುಕ್ತವಾಗಿ ಶಾಸಕರ ಜೊತೆ ಮಾತನಾಡುತ್ತೇವೆ. ಈ ಹಿಂದೆ ನಾವಿದ್ದಾಗ ಬಿಬಿಎಂಪಿ ಚುನಾವಣೆ ಸಮಯಕ್ಕೆ ಸರಿಯಾಗಿ ಮಾಡಲಾಗಿತ್ತು. ಈಗಲೂ ಬಿಬಿಎಂಪಿ ಚುನಾವಣೆ ಮಾಡುತ್ತೇವೆ. ಚುನಾಯಿತ ಪ್ರತಿನಿಧಿಗಳಿದ್ದರೆ ಕೆಲಸಗಳು ಸುಲಭವಾಗಿ ಆಗುತ್ತದೆ ಎಂದರು.

Join Whatsapp
Exit mobile version