Home ಟಾಪ್ ಸುದ್ದಿಗಳು ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಗೂ ಬೆಂಬಲ ನೀಡುತ್ತೇನೆ: ಮೊಯ್ದೀನ್ ಬಾವ

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಗೂ ಬೆಂಬಲ ನೀಡುತ್ತೇನೆ: ಮೊಯ್ದೀನ್ ಬಾವ

ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳಿಗೆ ಸಹಮತ ಇಲ್ಲ. ಸಿಎಎ, ಹಿಜಾಬ್, ಆಝಾನ್ ಗೆ ವಿರೋಧದ ಬಿಜೆಪಿಯ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ ಎಂದರು.

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವ ನಿಟ್ಟಿನಲ್ಲಿ ನನ್ನ ಬೆಂಬಲಿಗರು ಇಚ್ಛೆ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ನಿರ್ಧಾರ ಇನ್ನೂ ಮಾಡಿಲ್ಲ. ಮಾ.28ರಂದು ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಬಾವ ಹೇಳಿದರು.

Join Whatsapp
Exit mobile version