ನವದೆಹಲಿ: ನಾನು ಯಾವುದೇ ತಪ್ಪು ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ.
ಮಹಿಳಾ ಅಥ್ಲೀಟ್ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಕುಸ್ತಿ ಒಕ್ಕೂಟದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂದರೆ ಅದರ ಅರ್ಥ ಆರೋಪಗಳನ್ನು ಒಪ್ಪಿಕೊಂಡಾಗುತ್ತದೆ. ರಾಜೀನಾಮೆ ನೀಡುವುದು ದೊಡ್ಡ ವಿಷಯವಲ್ಲ. ನಾನು ಕ್ರಿಮಿನಲ್ ಅಲ್ಲ. ಎಫ್ಐಆರ್ ಪ್ರತಿ ಇನ್ನೂ ನನ್ನ ಕೈ ಸೇರಿಲ್ಲ. ಎಫ್ಐಆರ್ ಬಗ್ಗೆ ಪ್ರತಿ ಸಿಕ್ಕ ಬಳಿಕ ಮಾತನಾಡುತ್ತೇನೆಂದು ತಿಳಿಸಿದ್ದಾರೆ.
ಎಫ್ಐಆರ್ ದಾಖಲಿಸಿರುವ ದೆಹಲಿ ಪೊಲೀಸರು, ಆರೋಪಗಳ ಬಗ್ಗೆ ತನಿಖೆ ನಡೆಸುತ್ತಾರೆ, ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ. ಈ ದೇಶದಲ್ಲಿ ನ್ಯಾಯಾಂಗಕ್ಕಿಂತ ದೊಡ್ಡವರು ಯಾರೂ ಇಲ್ಲ. ನಾನು ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆಂದು ಹೇಳಿದ್ದಾರೆ.