ನವದೆಹಲಿ: ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಕಚೇರಿಗೆ ಬೀಗಮುದ್ರೆ ಹಾಕಿರುವುದು ಆಡಳಿತಾರೂಢ ಬಿಜೆಪಿಯ ಬೆದರಿಕೆಯ ಪ್ರಯತ್ನ, ಪ್ರಧಾನಿ ನರೇಂದ್ರ ಮೋದಿ ಅವರ ದಮನಕಾರಿ ಸರ್ಕಾರದ ಬಗ್ಗೆ ತಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ನೀವು ನ್ಯಾಷನಲ್ ಹೆರಾಲ್ಡ್ ಬಗ್ಗೆ ಮಾತನಾಡುತ್ತಿದ್ದೀರಿ, ಇದು ಬೆದರಿಕೆಯ ಪ್ರಯತ್ನ. ಸ್ವಲ್ಪ ಒತ್ತಡ ಹಾಕಿದರೆ ನಾವು ವಿರೋಧ ಪಕ್ಷದವರು ಸುಮ್ಮನಿರುತ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಿಸಿದ್ದಾರೆ. ಆದರೆ ನಾವು ಸುಮ್ಮನಾಗುವುದಿಲ್ಲ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರಜಾಪ್ರಭುತ್ವದ ವಿರುದ್ಧ ಏನೇ ಮಾಡಿದರೂ ನಾವು ನಮ್ಮ ನೆಲೆಯಲ್ಲಿ ಸದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದರು.
ನಾವು ನರೇಂದ್ರ ಮೋದಿಗೆ ಹೆದರುವುದಿಲ್ಲ. ಅವರು ಏನು ಮಾಡಲು ಬಯಸುತ್ತಾರೋ ಅದನ್ನು ಮಾಡಲಿ. ನನಗೆ ಅದು ಯಾವುದೇ ವ್ಯತ್ಯಾಸವನ್ನು ಉಂಟುಮಾಡುವುದಿಲ್ಲ. ದೇಶವನ್ನು ರಕ್ಷಿಸುವ, ಪ್ರಜಾಪ್ರಭುತ್ವವನ್ನು ರಕ್ಷಿಸುವ ಮತ್ತು ದೇಶದಲ್ಲಿ ಭ್ರಾತೃತ್ವವನ್ನು ಕಾಪಾಡುವ ಕೆಲಸವನ್ನು ನಾನು ಮುಂದುವರಿಸುತ್ತೇನೆ. ನಾವು ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.