ಬೆಂಗಳೂರು: ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇಂದು ನಿಯೋಜಿತ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದನೆ ಸಲ್ಲಿಸಿಲು ಬಂದಿದ್ದೆ. ಬೇರೆ ಯಾವುದೇ ಚರ್ಚೆ ಮಾಡಿಲ್ಲ ಎಂದರು.
ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಮತ್ತು ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಜಗದೀಶ್ ಶೆಟ್ಟರ್ ಹೇಳಿದರು.