ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ: ಸತೀಶ್ ಜಾರಕಿಹೊಳಿ

Prasthutha|

ಬೆಂಗಳೂರು: ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಹಾಗೂ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಸಿಗುವ ಭರವಸೆ ಹೊರ ಹಾಕಿದ್ದಾರೆ.

ರಾಮಮಂದಿರ ಉದ್ಘಾಟನೆ ಒನ್ ಮ್ಯಾನ್ ಶೋ ಆಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಲೋಕಸಭಾ ಚುನಾವಣೆ ಬೇರೆ ಬರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಇನ್ನೂ ಸಮಯ ಇದೆ ಆಹ್ವಾನ ಕೊಡಲಿ. ಯಾವ ಸಿಎಂಗೂ ಆಹ್ವಾನ ಕೊಟ್ಟಿಲ್ಲ. ಉತ್ತರ ಪ್ರದೇಶ ಸಿಎಂಗೆ ಮಾತ್ರ ಆಹ್ವಾನ ಇದೆ. ನನಗೆ ಆಹ್ವಾನ ಬಂದ್ರೆ ಹೋಗಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಇದೆ, ಅಲ್ಲೇ ಪೂಜೆ ಮಾಡುತ್ತೇನೆ. ಸದ್ಯ ರಶ್ ಇರುತ್ತೆ, ಮುಂದೆ ಯಾವಾಗಾದರೂ ಹೋಗುತ್ತೇನೆ ಎಂದರು.

Join Whatsapp