ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್ ಸ್ಪಷ್ಟನೆ

Prasthutha|

ಬೆಂಗಳೂರು: ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಆಸಕ್ತಿಯನ್ನೂ ಹೊಂದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

- Advertisement -


ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಬೇರೆ ಬೇರೆ ಕ್ಷೇತ್ರಗಳಿಂದ ಚುನಾವಣೆ ಸ್ಪರ್ಧೆಗೆ ಆಹ್ವಾನ ನೀಡುತ್ತಿದ್ದಾರೆ. ಚನ್ನಪಟ್ಟಣ, ರಾಜರಾಜೇಶ್ವರಿ ನಗರ ಸೇರಿದಂತೆ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು, ಹೊರಗಿನ 4 ಕ್ಷೇತ್ರಗಳು ಸೇರಿದಂತೆ ಒಟ್ಟು 10 ಕ್ಷೇತ್ರಗಳಿಂದ ನನ್ನ ಸ್ಪರ್ಧೆಗೆ ಆಹ್ವಾನವಿದೆ. ಆದರೆ ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿಯಿಲ್ಲ ಎಂದು ಹೇಳಿದ್ದಾರೆ.


ರಾಮನಗರದಲ್ಲಿ ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೇ ಸ್ಪರ್ಧೆ ಮಾಡುವುದಲ್ಲ. ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕು. ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ. ನಾನು ಏಕೈಕ ಸಂಸದನಾಗಿದ್ದೇನೆ. ಕಳೆದ 20 ವರ್ಷಗಳಲ್ಲಿ ಉಪಚುನಾವಣೆಗಳನ್ನು ಮಾಡಿ ರೋಸಿ ಹೋಗಿದ್ದೇನೆ ಎಂದರು.

Join Whatsapp