ನಾನು ಮುಖ್ಯಮಂತ್ರಿ ಆಗಲು ಸಿದ್ಧ: ಪ್ರಿಯಾಂಕ್ ಖರ್ಗೆ

Prasthutha|

ಮೈಸೂರು: ನಾನು ಮುಖ್ಯಮಂತ್ರಿ ಆಗಲು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -


ಸಿಎಂ ಆಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ಧ. ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ, ಇದರಲ್ಲಿ ತಪ್ಪಿಲ್ಲ ಎಂದರು.



Join Whatsapp