Home ಟಾಪ್ ಸುದ್ದಿಗಳು ದೇವೇಗೌಡರ ಸ್ಥಿತಿ ನೋಡಿದರೆ ನನಗೂ ಭಯವಾಗುತ್ತದೆ: ಡಿಕೆ ಶಿವಕುಮಾರ್‌

ದೇವೇಗೌಡರ ಸ್ಥಿತಿ ನೋಡಿದರೆ ನನಗೂ ಭಯವಾಗುತ್ತದೆ: ಡಿಕೆ ಶಿವಕುಮಾರ್‌

ಬೆಂಗಳೂರು: ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಡಿಸಿಎಂ ಪ್ರತಿಕ್ರಿಯಿಸಿದರು.

ದೇವೇಗೌಡರ ಸಿದ್ಧಾಂತವನ್ನು ನಾನು ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲಾ ಮಾಡಬೇಕು. ನನಗೆ ವಯಸ್ಸಾದ ಮೇಲೆ ನಮ್ಮ ಮನೆಗಳಲ್ಲಿ ಯಾವೆಲ್ಲಾ ಸಮಸ್ಯೆಗಳು ಬರುತ್ತವೆಯೋ ಗೊತ್ತಿಲ್ಲ. ಇದನೆಲ್ಲಾ ನೋಡಿದರೆ ನನಗೂ ಭಯವಾಗುತ್ತದೆ. ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದರು.

Join Whatsapp
Exit mobile version