‘ತಾಯಿಯಿಂದ ಪಡೆದ ಪ್ರೀತಿಯನ್ನು ದೇಶಕ್ಕೆ ಹಂಚಿಕೊಳ್ಳುತ್ತಿದ್ದೇನೆ’: ರಾಹುಲ್ ಗಾಂಧಿ ಟ್ವೀಟ್

Prasthutha|

ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ಹೆಜ್ಜೆ ಹಾಕಿದ್ದು, ತಮ್ಮ ತಾಯಿಯ ಕುರಿತು ರಾಹುಲ್ ಭಾವನಾತ್ಮಕ ಪೋಸ್ಟ್ ಅನ್ನು ಬರೆದುಕೊಂಡಿದ್ದಾರೆ.

- Advertisement -


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್’ನಲ್ಲಿ, “ತಾಯಿಯಿಂದ ಪಡೆದ ಪ್ರೀತಿಯನ್ನು ದೇಶದಲ್ಲಿ ಹರಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.


ಕನ್ಯಾಕುಮಾರಿಯಿಂದ ಸೆಪ್ಟೆಂಬರ್’ನಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿಯವರು ಎರಡನೇ ಬಾರಿಗೆ ಪಾಲ್ಗೊಂಡಿದ್ದಾರೆ. ಈ ಹಿಂದೆ ಅಕ್ಟೋಬರ್’ನಲ್ಲಿ ಕರ್ನಾಟಕದಲ್ಲಿದ್ದಾಗ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

- Advertisement -


ಸೋನಿಯಾ ಗಾಂಧಿ ಅವರು ಮುಖಕ್ಕೆ ಮಾಸ್ಕ್ ಧರಿಸಿ, ತಮ್ಮ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕೆಲವು ನಿಮಿಷಗಳ ಕಾಲ ಹೆಜ್ಜೆ ಹಾಕಿದರು.

Join Whatsapp