Home ಟಾಪ್ ಸುದ್ದಿಗಳು ‘ತಾಯಿಯಿಂದ ಪಡೆದ ಪ್ರೀತಿಯನ್ನು ದೇಶಕ್ಕೆ ಹಂಚಿಕೊಳ್ಳುತ್ತಿದ್ದೇನೆ’: ರಾಹುಲ್ ಗಾಂಧಿ ಟ್ವೀಟ್

‘ತಾಯಿಯಿಂದ ಪಡೆದ ಪ್ರೀತಿಯನ್ನು ದೇಶಕ್ಕೆ ಹಂಚಿಕೊಳ್ಳುತ್ತಿದ್ದೇನೆ’: ರಾಹುಲ್ ಗಾಂಧಿ ಟ್ವೀಟ್

ನವದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ಹೆಜ್ಜೆ ಹಾಕಿದ್ದು, ತಮ್ಮ ತಾಯಿಯ ಕುರಿತು ರಾಹುಲ್ ಭಾವನಾತ್ಮಕ ಪೋಸ್ಟ್ ಅನ್ನು ಬರೆದುಕೊಂಡಿದ್ದಾರೆ.


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್’ನಲ್ಲಿ, “ತಾಯಿಯಿಂದ ಪಡೆದ ಪ್ರೀತಿಯನ್ನು ದೇಶದಲ್ಲಿ ಹರಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.


ಕನ್ಯಾಕುಮಾರಿಯಿಂದ ಸೆಪ್ಟೆಂಬರ್’ನಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿಯವರು ಎರಡನೇ ಬಾರಿಗೆ ಪಾಲ್ಗೊಂಡಿದ್ದಾರೆ. ಈ ಹಿಂದೆ ಅಕ್ಟೋಬರ್’ನಲ್ಲಿ ಕರ್ನಾಟಕದಲ್ಲಿದ್ದಾಗ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


ಸೋನಿಯಾ ಗಾಂಧಿ ಅವರು ಮುಖಕ್ಕೆ ಮಾಸ್ಕ್ ಧರಿಸಿ, ತಮ್ಮ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕೆಲವು ನಿಮಿಷಗಳ ಕಾಲ ಹೆಜ್ಜೆ ಹಾಕಿದರು.

Join Whatsapp
Exit mobile version