ತ್ಯಾಗ ಮಾಡಿ ಮನೆಯಲ್ಲಿ ಕೂತಿದೀನಿ, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

Prasthutha|

ಹಾವೇರಿ: ಈ ಕ್ಷೇತ್ರದ ಲೋಕಸಭಾ ಟಿಕೆಟ್ ನನಗೆ ಕೊಡಬೇಕು, ನಾವು ತ್ಯಾಗ ಮಾಡಿ ಬಂದವರು ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

- Advertisement -

ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮನೆಯಲ್ಲಿ ಕೂತುಕೊಂಡಿದ್ದೇವೆ. ನಮಗೆ ಹೆದರಿಸೋದು ಬೆದರಿಸೋದು ಗೊತ್ತಿಲ್ಲ. ಸೈಲೆಂಟ್ ಆಗಿ ಇದ್ದೀವಿ ಎಂದರೆ ಅದು ನಮ್ಮ ದೌರ್ಬಲ್ಯ ಎಂದು ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಾನು ಹಾವೇರಿ ಹಾಗೂ ಗದಗ ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಹಾಗೆಂದು ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ ಎಂದರು.



Join Whatsapp