ಈಗಲೂ ಬಿಜೆಪಿಯಲ್ಲಿದ್ದೇನೆ, ಮುಂದೆಯೂ ಇರುತ್ತೇನೆ: ಎಂಟಿಬಿ ನಾಗರಾಜ್

Prasthutha|

ಬೆಂಗಳೂರು: ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟನೆ ನೀಡಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಗೆ ಬಂದಿರುವುದನ್ನು ತಪ್ಪು ಎಂದು ಭಾವಿಸಿಯೂ ಇಲ್ಲ. ಆ ರೀತಿ ಹೇಳಿಕೆಯೂ ನೀಡಿಲ್ಲ. ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ನಾನು ನನ್ನ ಜೀವನದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಮಾಡಿರುವ ಒಂದೇ ತಪ್ಪೆಂದರೆ ಅದು ಪಕ್ಷಾಂತರ ಎಂದು ಪುನರುಚ್ಛರಿಸಿದರು.



Join Whatsapp