Home ಟಾಪ್ ಸುದ್ದಿಗಳು ಬೆಳಗಾವಿಗೆ ನಾನೇ ಹೆಡ್: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿಗೆ ನಾನೇ ಹೆಡ್: ಸಚಿವ ಸತೀಶ್ ಜಾರಕಿಹೊಳಿ

ಕೊಪ್ಪಳ: ಬೆಳಗಾವಿಯಲ್ಲಿ ನಾನೇ ಹೆಡ್ ಆಫ್ ದ ಡಿಪಾರ್ಮೆಂಟ್. ಆದ್ದರಿಂದ ನಾನು ಯಾರ ಮೇಲೂ ಸಿಟ್ಟಾಗೋ ಪ್ರಸಂಗ ಬರೋದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಆನೆಗೊಂದಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ಬೆಳಗಾವಿ ರಾಜಕಾರಣದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾರ ನಡುವೆಯೂ ಗೊಂದಲ, ಸಮಸ್ಯೆಯಿಲ್ಲ. ಅಲ್ಲಿ ಯಾವುದೇ ಸಮಸ್ಯೆ ಇಲ್ಲ. ಎಲ್ಲವೂ ಸರಿಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬೆಳಗಾವಿ ಪಾಲಿಕೆ ಕಡತಗಳು ಕಳವಿನ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Join Whatsapp
Exit mobile version