ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ: ಹೆಚ್ ಡಿ ರೇವಣ್ಣ

Prasthutha|

ಬೆಳಗಾವಿ: ಭವಾನಿ ಅವರ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

- Advertisement -

ಕಾರಿಗೆ ಗುದ್ದಿದ ಬೈಕ್ ಸವಾರನಿಗೆ ಭವಾನಿ ರೇವಣ್ಣ ಬೈದಿರುವ ಬಗ್ಗೆ ಪ್ರತಿಕ್ರಿಯಿಸಿ, ಬೈಕ್ ಸವಾರನೇ ಒಂದು ಬದಿಯಿಂದ ಬಂದು ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗುತ್ತಿತ್ತು?. ಅವರು ಏನೂ ಅಹಂಕಾರದಿಂದ ಮಾತಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು. ಹೀಗಾಗಿ ಅವರು ಸಿಟ್ಟಲ್ಲಿ ಮಾತನಾಡಿದ್ದಾರೆ. ನಮ್ಮ ಕುಟುಂಬದವರಿಂದ ಯಾರಿಗೂ ನೋವು ಮಾಡುವ ಕೆಲಸ ಆಗಿಲ್ಲ ಎಂದು ಹೇಳಿದ್ದಾರೆ.

ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು?. ಅಪಘಾತದ ವಿಡಿಯೋವನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ. ಅವರು ಬೈಕ್ ಸವಾರನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು?. ಆದ್ದರಿಂದ ಭವಾನಿ ಅವರ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಭವಾನಿ ಯಾವತ್ತೂ ಯಾರಿಗೂ ನೋವು ಮಾಡಿಲ್ಲ.



Join Whatsapp
Exit mobile version