Home ಟಾಪ್ ಸುದ್ದಿಗಳು ಜನಾರ್ದನ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಹೇಳಿದ್ದೇನೆ: ಶ್ರೀರಾಮುಲು

ಜನಾರ್ದನ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಹೇಳಿದ್ದೇನೆ: ಶ್ರೀರಾಮುಲು

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬೇಕು ಎಂದು ಅಮಿತ್ ಶಾ ಅವರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.


ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನಾರ್ದನ ರೆಡ್ಡಿ ಅವರ ಕುರಿತಾಗಿ ನನ್ನೊಂದಿಗೆ ಚರ್ಚಿಸಿದರು.

ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ. ರೆಡ್ಡಿ ಈ ಭಾಗದಲ್ಲಿ ಶಕ್ತಿ ಇರುವ ನಾಯಕ. ಅವರು ಪಕ್ಷಕ್ಕೆ ಬಂದರೆ ಬಿಜೆಪಿಗೆ ಒಳ್ಳೆಯದಾಗಲಿದೆ ಎಂದರು.

Join Whatsapp
Exit mobile version