ದಾವಣಗೆರೆ: ಮಹಿಳೆ ಅಡುಗೆ ಮಾಡಲು ಮಾತ್ರ ಲಾಯಕ್ಕು ಎಂದು ನಾನು ಹೇಳಿಕೆ ನೀಡಿಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಅವರು ಹೇಳಿದ್ದಾರೆ.
ಬ್ಯಾಡ್ಮಿಂಟನ್ ಮಾಜಿ ಆಟಗಾರ್ತಿ ಬಿಜೆಪಿ ನಾಯಕಿ ಸೈನಾ ನೆಹ್ವಾಲ್ ‘ಎಕ್ಸ್’ ಖಾತೆಯಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಚುನಾವಣಾಧಿಕಾರಿಯವರು ಅವರಿಗೆ ನೋಟಿಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಲಿಖಿತವಾಗಿ ಸ್ಪಷ್ಟಪಡಿಸಿದ್ದಾರೆ.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆಯರು ಅಡುಗೆ ಮನೆಗೆ ಸೀಮಿತವಲ್ಲ ಎಂಬುದನ್ನು ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಸಾಬೀತುಪಡಿಸಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲೂ ಮಹಿಳೆಯರೇ ಸ್ಪರ್ಧಿಸಿದ್ದಾರೆ. ನನ್ನ ವಿರೋಧಿಗಳು ನನ್ನ ಹೇಳಿಕೆಯನ್ನು ತಿರುಚಿ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.