Home ಟಾಪ್ ಸುದ್ದಿಗಳು ‘ನಾನು ಸರಿಯಾದ ಕೆಲಸವನ್ನು ಮಾಡಿದ್ದೇನೆ’: ಬುಲ್ಲಿ ಬಾಯಿ ಪ್ರಕರಣದ ಪ್ರಮುಖ ಆರೋಪಿ ಸಮರ್ಥನೆ

‘ನಾನು ಸರಿಯಾದ ಕೆಲಸವನ್ನು ಮಾಡಿದ್ದೇನೆ’: ಬುಲ್ಲಿ ಬಾಯಿ ಪ್ರಕರಣದ ಪ್ರಮುಖ ಆರೋಪಿ ಸಮರ್ಥನೆ

ಹೊಸದಿಲ್ಲಿ: ಮುಸ್ಲಿಂ ಮಹಿಳೆಯರನ್ನು ಮಾರಾಟಕ್ಕಿಟ್ಟ ಬುಲ್ಲಿ ಬಾಯಿ ಆ್ಯಪ್‌ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ತನ್ನ ಕೃತ್ಯವನ್ನು ಸಮರ್ಥಿಸಿದ್ದು, ತಾನು ಸರಿಯಾದ ಕೆಲಸವನ್ನು ಮಾಡಿದ್ದೇನೆ ಎಂದು ಹೇಳಿದ್ದಾನೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ವರನ್ನು ಬಂಧಿಸಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಈ ಪ್ರಕರಣದ ಪ್ರಮುಖ ಆರೋಪಿ. ನೀರಜ್ ಭೋಪಾಲ್‌ ನ ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಬಿ.ಟೆಕ್ ವಿದ್ಯಾರ್ಥಿ.

ಬುಲ್ಲಿ ಬಾಯಿ ಹೆಸರಿನ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿದ್ದು, ಆರೋಪಿ ಬಿಷ್ಣೋಯ್ ಸದ್ಯ ಏಳು ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾನೆ.

Join Whatsapp
Exit mobile version