ಬಿಜೆಪಿ- ಜೆಡಿಎಸ್​​ ಮೈತ್ರಿಗೆ ನನ್ನ ಸಹಮತ ಇಲ್ಲ: ಶಾಸಕ ಸೋಮಶೇಖರ್

Prasthutha|

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ನೋಡಿದ್ದೇನೆ. ಈ ವಿಚಾರವಾಗಿ ನನಗೂ ವೈಯಕ್ತಿಕವಾಗಿ ಅಸಮಾಧಾನವಿದೆ ಎಂದು ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್ ಹೇಳಿದ್ದಾರೆ.

- Advertisement -

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವತ್ತೂ ನಮ್ಮ, ಅವರ ಕಾರ್ಯಕರ್ತರಿಗೆ ಹೊಂದಾಣಿಕೆ ಇಲ್ಲ. ಹತ್ತಿರದಿಂದ ಮಾನಸಿಕವಾಗಿ ಕಿರುಕುಳ ನೋಡಿದ್ದೇನೆ. ಅಧಿಕೃತವಾಗಿ ಮೈತ್ರಿಯಾದ ಬಳಿಕ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್​​ ಮೈತ್ರಿ ಇತ್ತು. ಅವರು ಇವರಿಗೆ ಮತ ಹಾಕಲಿಲ್ಲ, ಇವರು ಅವರಿಗೆ ಮತ ಹಾಕಲಿಲ್ಲ. ಯಾರೂ ಕೂಡ ಈ ಬಗ್ಗೆ ವೈಯಕ್ತಿಕವಾಗಿ ಹೇಳುತ್ತಿಲ್ಲ. ಮೈತ್ರಿ ವಿಚಾರವಾಗಿ ನಮ್ಮ ಪಕ್ಷದಲ್ಲಿ ಯಾರನ್ನೂ ಕರೆದು ಚರ್ಚಿಸಿಲ್ಲ ಎಂದಿದ್ದಾರೆ.



Join Whatsapp