ನನಗೆ EVMನಲ್ಲಿ ನಂಬಿಕೆ ಇಲ್ಲ: ದಿಗ್ವಿಜಯ ಸಿಂಗ್

Prasthutha|

ನವದೆಹಲಿ: 2003ರಿಂದಲೂ ಹೇಳುತ್ತಿದ್ದೇನೆ, ನನಗೆ EVMನಲ್ಲಿ ನಂಬಿಕೆ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

- Advertisement -

ಇವಿಎಂಗಳ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಎತ್ತಿರುವ ದಿಗ್ವಿಜಯ ಸಿಂಗ್, ವಿವಿವ್ಯಾಟ್ ಕಾಗದಗಳನ್ನು ಮತದಾರರಿಗೆ ಹಸ್ತಾಂತರಿಸಿ ಅವುಗಳನ್ನು ಬ್ಯಾಲೆಟ್ ಬಾಕ್ಸ್ ಗೆ ಹಾಕಿಸಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣೆಯಲ್ಲಿ ಇವಿಎಂಗಳನ್ನು ಬಳಸುವ ಬಗ್ಗೆ ವಿಡಿಯೊವೊಂದರಲ್ಲಿ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿರುವ ಅವರು, ‘ಇವಿಎಂನಲ್ಲಿ ನೀವು ಹಸ್ತಕ್ಕೆ ಒತ್ತಿದ್ದರೆ, ಸಾಫ್ಟ್ ವೇರ್ ‘ಕಮಲ’ ಎಂದು ಹೇಳಿದರೆ ಅದು ಏನನ್ನು ಮುದ್ರಿಸುತ್ತದೆ. ಹಸ್ತವನ್ನೋ? ಕಮಲವೋ? ಈಗ ವಿಷಯವೆಂದರೆ ವಿವಿಪ್ಯಾಟ್ ಯಂತ್ರವು ನಿಮಗೆ 7 ಸೆಕೆಂಡುಗಳ ಕಾಲ ‘ಹಸ್ತದ ಚಿಹ್ನೆ’ ತೋರಿಸಿದೆ. ನಾವು ಸಂತೋಷದಿಂದ ಹೊರಗೆ ಬರುತ್ತೇವೆ. ಆದರೆ ಅಲ್ಲಿ ಕಮಲ ಮುದ್ರಿಸಲಾಗುತ್ತದೆ. ನೀವು ಈ ಚಮತ್ಕಾರವನ್ನು ರಾಹುಲ್ ಮೆಹ್ತಾ ಅವರ ವಿಡಿಯೊದಲ್ಲಿ ವೀಕ್ಷಿಸಬಹುದು’ ಎಂದು ಸಿಂಗ್ ತಮ್ಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

Join Whatsapp