ನನಗೆ ಸ್ಪೀಕರ್‌ ಆಗುವ ಅರ್ಹತೆ ಇಲ್ಲ: ಆರ್.ವಿ ದೇಶಪಾಂಡೆ ಟಾಂಗ್

Prasthutha|

ಬೆಂಗಳೂರು: ನನಗೆ ಸ್ಪೀಕರ್‌ ಆಗುವ ಅರ್ಹತೆ ಇಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

- Advertisement -


ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಅವರು, ನಾಳೆ ಸಚಿವ ಸಂಪುಟ ರಚನೆಯಾಗಲಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದರೆ, ಸಚಿವ ಸಂಪುಟದಲ್ಲಿ ನಾನು ಇರುವ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದ ಸಚಿವ ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.


ಈಗಾಗಲೇ ರಾಜ್ಯದಲ್ಲಿ ನಾನು 8 ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೇನೆ. ಈ ಬಾರಿ ಏನು ಮಾಡುತ್ತಾರೆ, ಏನು ಇಲ್ಲ ಅನ್ನೋದು ಅವರಿಗೆ ಬಿಟ್ಟ ವಿಚಾರವಾಗಿದೆ. ಆದರೆ, ಕಾಂಗ್ರೆಸ್‌ ಸರ್ಕಾರದ ಸ್ಪೀಕರ್‌ ಆಗುವ ಅರ್ಹತೆ ನನಗೆ ಇಲ್ಲವೆಂದು ಅನಿಸುತ್ತದೆ. ಅದು ಬಹಳ ದೊಡ್ಡ ಹುದ್ದೆಯಾಗಿದ್ದು, ಸರ್ಕಾರದಲ್ಲಿಯೇ ಅತ್ಯಂತ ಜವಾಬ್ದಾರಿ ಹುದ್ದೆಯಾಗಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ಪೀಕರ್ ಆಗಲು ತಯಾರಿಲ್ಲ ಅನ್ನೋದನ್ನು ತಿಳಿಸಿದ್ದಾರೆ.



Join Whatsapp