ವಜಾಗಳಿಗೆಲ್ಲ ನಾನು ತಲೆಕೆಡಿಸಿಕೊಳ್ಳಲ್ಲ: ರಘುಪತಿ ಭಟ್

Prasthutha|

ಉಡುಪಿ: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಮಾಧ್ಯಮಗಳ ಮೂಲಕ ನನ್ನ ಉಚ್ಛಾಟನೆ ಮಾಡಿರುವುದು ಗೊತ್ತಾಯಿತು. ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾ ಮಾಡುತ್ತೇವೆ ಎಂದಿದ್ದಾರೆ. ಪಕ್ಷ ಯಾವ ಹುದ್ದೆಯಂದ ನನ್ನ ವಜಾ ಮಾಡಿದೆ ಎಂದು ಮೊದಲು ಹೇಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತ, ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

- Advertisement -

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಘುಪತಿ ಭಟ್, ಇಂತಹ ವಜಾಗಳಿಗೆಲ್ಲ ನಾನು ತಲೆಕೆಡಿಸಿಕೊಳ್ಳಲ್ಲ. ನಾನು ಮೋದಿಗೆ ಬೈದಿಲ್ಲ, ರಾಜ್ಯದ ನಾಯಕರನ್ನು ಬೈದಿಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪಕ್ಷದ ನಾಯಕರನ್ನು ಟೀಕಿಸಿದ ಜಗದೀಶ್ ಶೆಟ್ಟರ್ ಮತ್ತೆ ಪಕ್ಷಕ್ಕೆ ಬಂದರು. ಪಕ್ಷಕ್ಕೆ ವಾಪಾಸ್ ಆಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಇದು ಶಾಶ್ವತವಾದ ವಜಾ ಅಲ್ಲ. ಪರಿಷತ್ ಚುನಾವಣೆಯಲ್ಲಿ ಗೆದ್ದರೆ ವಜಾ ರದ್ದಾಗುತ್ತದೆ. ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

Join Whatsapp