ನನಗೆ ಸಚಿವ ಸ್ಥಾನ ಅಗತ್ಯವಿಲ್ಲ: ಅಸಮಾಧಾನ ಹೊರಹಾಕಿದ ಈಶ್ವರಪ್ಪ

Prasthutha|

ಬೆಂಗಳೂರು : ನನಗೆ ಸಚಿವ ಸ್ಥಾನ ಅಗತ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

- Advertisement -


ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದರೂ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳಿಗೆ ತಿಳಿಸುವ ಮೂಲಕ ನೇರವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.


ಆರ್.ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿಯಾದರು. ಈ ವೇಳೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ ಇನ್ಮುಂದೆ ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟವಾಗಿ ಸಿಎಂ ಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

Join Whatsapp