Home ಟಾಪ್ ಸುದ್ದಿಗಳು ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ, ಇದ್ದ ಮನೆ ಸಾಲ ತೀರಿಸಲಾಗದೆ ಮಾರಿಬಿಟ್ಟೆ: ಸಿಎಂ ಸಿದ್ದರಾಮಯ್ಯ

ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ, ಇದ್ದ ಮನೆ ಸಾಲ ತೀರಿಸಲಾಗದೆ ಮಾರಿಬಿಟ್ಟೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಎರಡು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಉಪಮುಖ್ಯಮಂತ್ರಿ, ಹಲವು ಬಾರಿ ಸಚಿವನಾಗಿದ್ದೇನೆ. ಕಳೆದ ನಾಲ್ಕು ದಶಕಗಳಿಂದ ಮುಂಚೂಣಿ ರಾಜಕಾರಣದಲ್ಲಿದ್ದೇನೆ. ಹೀಗಿದ್ದರೂ ನನಗೆ ಈಗ ಕಟ್ಟುತ್ತಿರುವ ಮನೆ ಬಿಟ್ಟು ಮೈಸೂರಿನಲ್ಲಿ ಒಂದು ನಿವೇಶನವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ. ಈಗಷ್ಟೇ ಕಟ್ಟಿಸುತ್ತಿದ್ದೇನೆ. ಹಿಂದೆ ಇದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆಯನ್ನು ಮಾರಿಬಿಟ್ಟೆ ಎಂದರು.


ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

Join Whatsapp
Exit mobile version