ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ: ನಟ ದುನಿಯಾ ವಿಜಯ್

Prasthutha|

ಬೆಂಗಳೂರು: ಧರ್ಮಸ್ಥಳದಲ್ಲಿ ಮಣ್ಣಸಂಕ ಬಳಿ ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ನಟ ದುನಿಯಾ ವಿಜಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -


ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ ಎಂದು ಹೇಳಿದ್ದಾರೆ.


ಅಕ್ಟೋಬರ್ 9, 2012 ರಂದು, ಸೌಜನ್ಯ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿತ್ತು.

Join Whatsapp
Exit mobile version