ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

Prasthutha|

ಮಂಗಳೂರು: ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಯಾರ ಬಗ್ಗೆ ಟೀಕೆ ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಹೈಕಮಾಂಡ್ ಅವರಿಗೆ ಏನೂ ಮಾತನಾಡಬೇಡಿ ಹೇಳಿದೆ. ಅವರು ಹೇಳುವುದು ಸರಿಯಲ್ಲ, ಒಬ್ಬ ರಾಜಕಾರಣಿ ಆ ರೀತಿ ಮಾತನಾಡಬಾರದು ಎಂದರು.

ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಗೊತ್ತಿಲ್ಲ. ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು. ಇದರಿಂದ ಯಾರಿಗೂ ತೊಂದರೆ ಆಗಿಲ್ಲ ಎಂದರು.

Join Whatsapp