Home ಟಾಪ್ ಸುದ್ದಿಗಳು ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಅರ್ಥವಾಗುತ್ತಿಲ್ಲ: ದಿನೇಶ್ ಗುಂಡೂರಾವ್

ಮಂಗಳೂರು: ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಯಾರ ಬಗ್ಗೆ ಟೀಕೆ ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಹೈಕಮಾಂಡ್ ಅವರಿಗೆ ಏನೂ ಮಾತನಾಡಬೇಡಿ ಹೇಳಿದೆ. ಅವರು ಹೇಳುವುದು ಸರಿಯಲ್ಲ, ಒಬ್ಬ ರಾಜಕಾರಣಿ ಆ ರೀತಿ ಮಾತನಾಡಬಾರದು ಎಂದರು.

ಬಿಕೆ ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಎಂಬುದು ಗೊತ್ತಿಲ್ಲ. ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು. ಇದರಿಂದ ಯಾರಿಗೂ ತೊಂದರೆ ಆಗಿಲ್ಲ ಎಂದರು.

Join Whatsapp
Exit mobile version