ಪ್ರಧಾನಿ ಅಭ್ಯರ್ಥಿಯಾಗಲು ನಾನು ಬಯಸುವುದಿಲ್ಲ: ನಿತೀಶ್‌ ಕುಮಾರ್

Prasthutha|

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ನಾನು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.

- Advertisement -

ಪಾಟ್ನಾದಲ್ಲಿ ವಿಪಕ್ಷಗಳ ಮೈತ್ರಿಕೂಟ `ಇಂಡಿಯಾ’ದ ಸಂಚಾಲಕನ ಪಾತ್ರವನ್ನು ನೀವು ಸ್ವೀಕರಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ನಾನು ಏನೂ ಆಗಲು ಬಯಸುವುದಿಲ್ಲ. ನಾನು ಇದನ್ನು ನಿಮಗೆ ಮತ್ತೆ ಹೇಳುತ್ತಿದ್ದೇನೆ. ನನಗೆ ಅಂತಹ ಯಾವುದೇ ಆಸೆ ಇಲ್ಲ. ಆದರೆ, ಎಲ್ಲರನ್ನು ಒಗ್ಗೂಡಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ರಚಿಸಲಾಗಿರುವ 26 ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ನಡೆಯಲಿದೆ.