ಬೆಂಗಳೂರು: ಶಾಸಕ ಬಿ ಆರ್ ಪಾಟೀಲ್ ಗೆ ನನ್ನನ್ನು ಬಂದು ಭೇಟಿಯಾಗುವಂತೆ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಿವತ್ತು ಬಿ ಆರ್ ಪಾಟೀಲ್ ಜೊತೆ ಮಾತನಾಡಿದ್ದೇನೆ. ನಿನ್ನೆಯೇ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ. ಆದರೆ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಅವರೊಂದಿಗೆ ಮಾತನಾಡಿದೆ. ನನ್ನನ್ನು ಬಂದು ಭೇಟಿಯಾಗುವಂತೆ ಹೇಳಿದ್ದೇನೆ. ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದರು.