ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ| ಘಟನೆ ಕುರಿತು ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಉಡುಪಿ: ರವಿವಾರ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Join Whatsapp