Home ಟಾಪ್ ಸುದ್ದಿಗಳು ಎಲ್ಲವನ್ನೂ ಕಳೆದುಕೊಂಡಿದ್ದೇನೆ: ಕಣ್ಣೀರಿಟ್ಟ ಅಜ್ಜಿ ಮಾತಿಗೆ ಕರಗಿದ ಕಾಡಾನೆ..!

ಎಲ್ಲವನ್ನೂ ಕಳೆದುಕೊಂಡಿದ್ದೇನೆ: ಕಣ್ಣೀರಿಟ್ಟ ಅಜ್ಜಿ ಮಾತಿಗೆ ಕರಗಿದ ಕಾಡಾನೆ..!

►ವಯನಾಡ್’ನಲ್ಲಿ ಜೀವನ ರಕ್ಷಣೆಗೆ ಕಾವಲಾಗಿ ನಿಂತ ಆನೆಯ ಕಥೆ ವೈರಲ್

ವಯನಾಡ್: ವಯನಾಡ್ ನಲ್ಲಿ ಜುಲೈ 30 ರಂದು ಉಂಟಾದ ಭೂಕುಸಿದದಿಂದಾಗಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಅಜ್ಜಿ, ಮೊಮ್ಮಗಳ ಜೀವನ ರಕ್ಷಣೆಗೆ ಕಾವಲಾಗಿ ನಿಂತ ಆನೆಯ ಕಥೆಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸುಜಾತ ಅವರು ಟೀ ಎಸ್ಟೇಟ್ ನ ಕೆಲಸಗಾರ್ತಿಯಾಗಿದ್ದರು. ಭೂಕೂಸಿತ ಆಗಿ ಎಲ್ಲವನ್ನೂ ಕಳೆದುಕೊಂಡು ಒಂಟಿತಯಾಗಿ ನಿಂತಾಗ ಇವರಿಗೆ ಕಾವಲಾಗಿ ನಿಂತಿದ್ದ ಮೂಲಕ ಪ್ರಾಣಿಯ ಕುರಿತಾಗಿ ಹೇಳಿಕೊಂಡಿದ್ದಾರೆ.

ಸೋಮವಾರ ರಾತ್ರಿ 4 ಗಂಟೆಗೆ ನಮ್ಮ ಮೇಲೆ ಮನೆ ಕುಸಿದು ಬಿತ್ತು. ನಾನು ಇಟ್ಟಿಗೆ ರಾಶಿಯನ್ನು ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು ಅಳಿಯ ಎಲ್ಲರೂ ಹೊರಗೆ ಬಂದು ಬೆಟ್ಟದ ಕಡೆ ಓಡ ತೊಡಗಿದ್ದೇವು ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

ಅಲ್ಲಿಂದ ತಪ್ಪಿಸಿಕೊಂಡು ಕಾಡಿನ ಕಡೆಗೆ ಬಂದ್ರೆ ಅಲ್ಲಿ ನಮಗೆ ಎದುರಾಗಿ ನಿಂತವನೇ ಆನೆ. ನಮ್ಮ ಜೀವವೆ ಮತ್ತೆ ಹೋದಂತೆ ಆಗಿತ್ತು. ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೀವಿ. ನೀನು ನಮಗೇನೂ ಮಾಡಬೇಡಪ್ಪಾ. ಕತ್ತಲೂ ಇದೆ, ಎಲ್ಲವನ್ನೂ ಕಳೆದುಕೊಂಡು ಬಂದಿದ್ದೇವೆ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲ ಹತ್ತಿರವೇ ಸಮಯ ಕಳೆದೆವು. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಅಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದ್ದಾರೆ ಎಂದು ಹೇಳುತ್ತಾ ಮೂಕ ಪ್ರಾಣಿಯ ಮಾನವೀಯತೆ ನೆನೆದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಈ ಸ್ಟೋರಿ ಇದೀಗ ವೈರಲ್ ಆಗಿದ್ದು, ಕಾಡಾನೆಯ ಮಾನವೀಯ ಕಾರ್ಯಕ್ಕೆ ಎಲ್ಲಡೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

Join Whatsapp
Exit mobile version