ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ: ಬಿಕೆ ಹರಿಪ್ರಸಾದ್

Prasthutha|

ಬೆಂಗಳೂರು: ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

- Advertisement -


ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತಿದೆ ಎಂದಿದ್ದ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಾಮಾಜಿಕ ಬದಲಾವಣೆಗಾಗಿ ನಾನು ರಾಜಕೀಯಕ್ಕೆ ಬಂದವನು ಎಂದಿದ್ದಾರೆ.


ಮಂತ್ರಿ, ಸಿಎಂ ಸೇರಿ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version