ಸರ್ಕಾರ ಬಿಡುಗಡೆ ಮಾಡಿರುವ FSL ವರದಿಯನ್ನು ನಾನು ನೋಡಿಯೇ ಇಲ್ಲ: ಪ್ರಿಯಾಂಕ್ ಖರ್ಗೆ

Prasthutha|

ಗದಗ: ಸರ್ಕಾರ ಬಿಡುಗಡೆ ಮಾಡಿರುವ ವಿಧಿವಿಜ್ಞಾನ ಪ್ರಯೋಗಾಲಯ ವರದಿಯನ್ನು ನಾನು ನೋಡಿಯೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -


ವಿಧಾನಸೌಧದಲ್ಲಿ `ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಮೂವರನ್ನು ಅರೆಸ್ಟ್ ಮಾಡಲಾಗಿದೆ. ಇಷ್ಟಕ್ಕೆ ಕೇಸ್ ಮುಗಿಯಲ್ಲ. ಇನ್ನೂ ಅವರ ಧ್ವನಿ ಹೋಲಿಕೆಯ ಬಗ್ಗೆ ಪರಿಶೀಲಿಸಬೇಕು. ಆ ಸಂದರ್ಭದಲ್ಲಿ ಅವರು ಅಲ್ಲಿದ್ರಾ ಅನ್ನೋದನ್ನು ದೃಢಪಡಿಸಬೇಕು. ನಂತರ ಮುಂದಿನ ತನಿಖೆಯಾಗುತ್ತದೆ ಎಂದು ತಿಳಿಸಿದ್ದಾರೆ.


ಜೆಪಿಯವರು ಖಾಸಗಿ ವರದಿಯನ್ನು ಸರ್ಕಾರಿ ವರದಿಯಾಗಿ ಬಿಂಬಿಸುವುದು ತಪ್ಪು ಎಂದು ಹೇಳಿದ್ದಾರೆ.



Join Whatsapp