ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿಲ್ಲ: ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

Prasthutha|

- Advertisement -

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ನಾನು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೂ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ರಾಜ್ಯಪಾಲರು ಪ್ರಾಸಿಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.

- Advertisement -

ಇನ್ನು ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಮುಡಾ ಸಂಬಂಧ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೇಳುವುದು ಇಲ್ಲ ಎಂದರು.



Join Whatsapp