ಇನ್ಸ್ ಪೆಕ್ಟರ್ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸ್ಪಷ್ಟನೆ

Prasthutha|

ಮೈಸೂರು: ತನ್ನ ವಿರುದ್ಧದ ಆರೋಪಗಳಿಗೆ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಮಾಜಿ ಶಾಸಕ ಯತೀಂದ್ರ, ಸಿಎಸ್ ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಸ್ಪಷ್ಟನೆ ನೀಡಿದರು.

- Advertisement -


ಅಲ್ಲದೆ, ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ ಎಂದು ಹೇಳಿದರು.


ವೈರಲ್ ವಿಡಿಯೋದಲ್ಲಿ, “ಹಲೋ ಅಪ್ಪಾ… ವಿವೇಕಾನಂದನ? ಯಾರು? ಅಂತ ಯತೀಂದ್ರ ಅವರು ಸಿದ್ದರಾಮಯ್ಯ ಅವರ ಬಳಿ ಕೇಳುವುದನ್ನು ಕಾಣಬಹುದು. ಈ ವಿಚಾರವಾಗಿ ಇಂದು ಟ್ವೀಟ್ ಮಾಡಿದ ಕುಮಾರಸ್ವಾಮಿ, ವಿವೇಕಾನಂದರ ವರ್ಗಾವಣೆ ಕುರಿತ ಪ್ರತಿಯನ್ನು ಹಂಚಿಕೊಂಡು “ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

Join Whatsapp