Home ಟಾಪ್ ಸುದ್ದಿಗಳು ಇನ್ಸ್ ಪೆಕ್ಟರ್ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸ್ಪಷ್ಟನೆ

ಇನ್ಸ್ ಪೆಕ್ಟರ್ ವರ್ಗಾವಣೆಗೂ ನನಗೂ ಸಂಬಂಧವಿಲ್ಲ: ಯತೀಂದ್ರ ಸ್ಪಷ್ಟನೆ

ಮೈಸೂರು: ತನ್ನ ವಿರುದ್ಧದ ಆರೋಪಗಳಿಗೆ ಮೈಸೂರಿನಲ್ಲಿ ಸ್ಪಷ್ಟನೆ ನೀಡಿದ ಮಾಜಿ ಶಾಸಕ ಯತೀಂದ್ರ, ಸಿಎಸ್ ಆರ್ ಫಂಡ್ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಸ್ಪಷ್ಟನೆ ನೀಡಿದರು.


ಅಲ್ಲದೆ, ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ ಎಂದು ಹೇಳಿದರು.


ವೈರಲ್ ವಿಡಿಯೋದಲ್ಲಿ, “ಹಲೋ ಅಪ್ಪಾ… ವಿವೇಕಾನಂದನ? ಯಾರು? ಅಂತ ಯತೀಂದ್ರ ಅವರು ಸಿದ್ದರಾಮಯ್ಯ ಅವರ ಬಳಿ ಕೇಳುವುದನ್ನು ಕಾಣಬಹುದು. ಈ ವಿಚಾರವಾಗಿ ಇಂದು ಟ್ವೀಟ್ ಮಾಡಿದ ಕುಮಾರಸ್ವಾಮಿ, ವಿವೇಕಾನಂದರ ವರ್ಗಾವಣೆ ಕುರಿತ ಪ್ರತಿಯನ್ನು ಹಂಚಿಕೊಂಡು “ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ?” ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version