ದಂಡ ಕಟ್ಟಿದ್ದೇನೆ, ಕರೆಂಟ್ ಕಳ್ಳ ಎನ್ನುವುದನ್ನು ನಿಲ್ಲಿಸಿ: ಕುಮಾರಸ್ವಾಮಿ

Prasthutha|

ಬೆಂಗಳೂರು: ನನಗೆ ಕರೆಂಟ್ ಕಳ್ಳ ಎನ್ನುವ ಲೇಬಲ್ ಅನ್ನು ಸಿಎಂ, ಡಿಸಿಎಂ ಹಾಗೂ ಅವರ ಪಟಾಲಂ ಸೇರಿ ಇಟ್ಟಿದ್ದಾರೆ. ನನ್ನನ್ನು ಕರೆಂಟ್ ಕಳ್ಳ ಎನ್ನುವ ಇವರ ಆರೋಪಗಳಿಗೆಲ್ಲ ನಾನು ಹೆದರಲ್ಲ. ನಿಮ್ಮಷ್ಟು ಕಳ್ಳತನ ನಾನು ಮಾಡಿಲ್ಲ. ಬೆಸ್ಕಾಂ ನೀಡಿರುವ ಬಿಲ್ ಹಾಗೂ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ಕರೆಂಟ್ ಕಳ್ಳ ಎನ್ನುವುದನ್ನು ನಿಲ್ಲಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಜೆ.ಪಿ.ಭವನದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ದೀಪಾವಳಿ ಸಮಯದಲ್ಲಿ ನಮ್ಮ ಮನೆಯಲ್ಲಿ ಅಚಾತುರ್ಯ ಆಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಲೈಟಿಂಗ್ ಹಾಕಿದ್ದಕ್ಕೆ ಹೆಚ್ಚು ವಿದ್ಯುತ್ ಖರ್ಚಾಗಲ್ಲ. ಲೈಟಿಂಗ್ ಹಾಕಿದ್ದಕ್ಕೆ 1 ಕಿಲೋ ವ್ಯಾಟ್ಗಿಂತಲೂ ಕಡಿಮೆ ವಿದ್ಯುತ್ ಉಪಯೋಗ ಆಗಲಿದೆ. ಆದರೆ ಇವರು 2.5 ಕಿಲೋ ವ್ಯಾಟ್ಗೆ ಲೆಕ್ಕ ತೆಗೆದುಕೊಂಡು, 7 ದಿನಗಳಿಗೆ 71 ಯುನಿಟ್ ಆಗಲಿದೆ ಎಂದು ಬಿಲ್ ಕೊಟ್ಟಿದ್ದಾರೆ. 71 ಯೂನಿಟ್ಗೆ ಮೂರು ಪಟ್ಟು, 68,526 ರೂಪಾಯಿ ದಂಡ ವಿಧಿಸಿದ್ದಾರೆ. ಆ ಬಿಲ್ನಲ್ಲಿ ಅವರ ಲೆಕ್ಕಾಚಾರದಲ್ಲಿ 2.5 ಕಿಲೋ ವ್ಯಾಟ್ ವಿದ್ಯುತ್ ಉಪಯೋಗ ಆಗಿದೆ ಅಂತ ಹಾಕಿದ್ದಾರೆ. ಈ ಬಿಲ್ ಅನ್ನು ಮರು ಪರಿಶೀಲನೆ ಮಾಡಬೇಕು. ನಮ್ಮ ಮನೆಯಲ್ಲಿ 33 ಕಿಲೋ ವ್ಯಾಟ್ ಪರ್ಮಿಷನ್ ತೆಗೆದುಕೊಂಡಿದ್ದೇನೆ. ನಾನು ನಿತ್ಯ ಉಪಯೋಗ ಮಾಡುವ ಕರೆಂಟ್ ಇದು. ಈ ಬಗ್ಗೆ ಮರುಪರಿಶೀಲನೆ ಆಗಬೇಕು.” ಎಂದು ಒತ್ತಾಯಿಸಿದರು.



Join Whatsapp