ಯತ್ನಾಳ್ ಮೂರನೇ ಟಿಪ್ಪು ಎನ್ನಲು ನನ್ನಲ್ಲಿ ಫೋಟೋಗಳಿವೆ: ಎಂ.ಬಿ.ಪಾಟೀಲ್

Prasthutha|

ವಿಜಯಪುರ: ಶಾಸಕ ಯತ್ನಾಳ ಈ ಹಿಂದೆ ಟಿಪ್ಪು ಸುಲ್ತಾನ್‌ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಹಾಗಾದರೆ ಯತ್ನಾಳ್‌ ಅವರು ಮೂರನೇ ಟಿಪ್ಪು ಸುಲ್ತಾನ್ ಎಂದು ಸಚಿವ ಎಂ. ಬಿ. ಪಾಟೀಲ್‌ ಟಾಂಗ್ ನೀಡಿದ್ದಾರೆ.

- Advertisement -

ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಯತ್ನಾಳ್‌ ಕೂಡ ಟಿಪ್ಪು ಸುಲ್ತಾನ ಜಯಂತಿಯಲ್ಲಿ ಪಾಲ್ಗೊಂಡಿರುವ ಫೋಟೋಗಳು ಇವೆ. ಹಾಗಾದರೆ ಅವರನ್ನು ಮೂರನೇ ಟಿಪ್ಪು ಸುಲ್ತಾನ್‌ ಎನ್ನಬಹುದು ಎಂದು ಹೇಳಿದರು. ಸಿದ್ದರಾಮಯ್ಯ ಅವರನ್ನು ಎರಡನೇ ಟಿಪ್ಪು ಸುಲ್ತಾನ್ ಎಂದು ಜರಿಯುವ ಇದೇ ಯತ್ನಾಳ್ ಈ ಹಿಂದೆ ಟಿಪ್ಪು ಸುಲ್ತಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಫೋಟೋಗಳು ನನ್ನ ಬಳಿ ಇವೆ. ಮಾಧ್ಯಮದವರೇ ಯಾರೋ ನನಗೆ ಅವುಗಳನ್ನು ಕಳಿಸಿದ್ದಾರೆ. ಎಲ್ಲವೂ ನಿಮ್ಮ ಬಳಿಯೇ ಇದ್ದರೂ ನಮ್ಮ ಬಾಯಿಂದ ಹೇಳಿಸುತ್ತೀರಿ ಎಂದು ಬಿಜೆಪಿ ಶಾಸಕ ಯತ್ನಾಳಗೆ ತಿರುಗೇಟು ನೀಡಿದರು.

Join Whatsapp