ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ಗೊತ್ತಿದೆ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಏನೇನೋ ಹೇಳಿದ್ದಾರೆ. ಕುಮಾರಸ್ವಾಮಿ ಯಾರಿಗೆ ಕಾಲ್ ಮಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ನನಗೆ ಎಲ್ಲರೂ ಹೇಳುತ್ತಿದ್ದಾರೆ.


ಅಡ್ಡ ಮತದಾನಕ್ಕೆ ಪ್ರಯತ್ನ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸುಮ್ಮನೆ ಅರ್ಜಿ ಹಾಕ್ತಾರಾ ಎಂದು ಹೇಳುವ ಮೂಲಕ ಅಡ್ಡ ಮತದಾನಕ್ಕೇ ರಾಜ್ಯಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹಾಕಿದೆ ಎಂದರು. ಅಲ್ಲದೆ, ಏನೇನು ನಡೆಯುತ್ತಿದೆ ಅನ್ನೋದು ನಮಗೆಲ್ಲವೂ ಗೊತ್ತಿದೆ ಎಂದರು.



Join Whatsapp