ಬಿಗ್​ಬಾಸ್​ ಸ್ಪರ್ಧಿ ಸಂತೋಷ್​ ಬಂಧಿಸಲು ನಾನೇ ಹೇಳಿದ್ದು: ಸಚಿವ ಈಶ್ವರ್ ಖಂಡ್ರೆ

Prasthutha|

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ  ವರ್ತೂರು ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇದೀಗ ನ್ಯಾಂಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸವಿವ ಈಶ್ವರ್ ಖಂಡ್ರೆ, ಸಂತೋಷ್ ಹುಲಿ ಉಗುರಿನ ಪೆಂಡೆಂಟ್​ ಧರಿಸಿರುವುದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಯಾರೇ ಆದರೂ ಕಾನೂನು ರೀತಿಯ ಕ್ರಮ ಜರುಗಿಸಲು ನಾನು ಸೂಚನೆ ನೀಡಿದ್ದೇನೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಾರೆ, ನಂತರ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

- Advertisement -

ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆ ಅಡಿ ಕಾನೂನಿನ ಕ್ರಮ ಜರುಗಿಸಿಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿಗೆ ಎಲ್ಲರೂ ಸಮಾನರು. ರಾಜ್ಯದಲ್ಲಿ ಈ ರೀತಿಯ ಘಟನೆಗಳಿಗೆ ಸರ್ಕಾರ ನಮ್ಮ ಇಲಾಖೆ ಆಸ್ಪದ ನೀಡುವುದಿಲ್ಲ. ಹಲವು ಕಡೆ  ಕಳ್ಳ ಬೇಟೆ ನಡೆಯುತ್ತದೆ ಅನ್ನೋ ಮಾಹಿತಿ ಇದೆ. ಮೊನ್ನೆಯಸ್ಟೇ ದಾಂಡೇಲಿಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಈಗ ಕಾಡು ಪ್ರಾಣಿಗಳ ಭೇಟೆ ಸಾಕಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಹಾಗೂ ರಾಷ್ಟ್ರದಲ್ಲಿ ಅರಣ್ಯ, ವನ್ಯಜೀವಿ, ಪರಿಸರ ಸಂರಕ್ಷಣೆ ಕಾಯ್ದೆ ಇದೆ. ಇವೆಲ್ಲಾ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸ ಹಾಗೂ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದೇ ನಿಟ್ಟಿನಲ್ಲಿ ಸರ್ಕಾರ ಕಾನೂನು ಕ್ರಮ ಪಾಲಿಸುತ್ತದೆ ಎಂದು ಖಂಡ್ರೆ ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಯಾರೇ ಆದರೂ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

Join Whatsapp